ರಾಜ್ಯದಲ್ಲಿ ಓಮಿಕ್ರಾನ್ ಅಬ್ಬರ: ಕಳೆದ 24 ಗಂಟೆಯಲ್ಲಿ 149 ಹೊಸ ರೂಪಾಂತರಿ ಪತ್ತೆ, 226ಕ್ಕೇರಿದ ಸೋಂಕಿನ ಸಂಖ್ಯೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಅಬ್ಬರ ಹೆಚ್ಚಾಗಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟಾರೆ 149 ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಇಂದು 149 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 226ಕ್ಕೇ ಏರಿಕೆಯಾಗಿದೆ.
ರಾಜ್ಯದಲ್ಲಿ ಐದು ಪಟ್ಟು ವೇಗವಾಗಿ ಓಮಿಕ್ರಾನ್ ಸೋಂಕು ಹಬ್ಬುತ್ತಿದೆ. ಇಂದು ಒಂದೇ ದಿನ 149 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.