ಫೆಬ್ರವರಿಯಲ್ಲಿ ಜಂಟಿ ಸದನ ಅಧಿವೇಶನ ನಡೆಸಲು ಸರ್ಕಾರ ಚಿಂತನೆ
ಬೆಂಗಳೂರು: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಜನವರಿ 19 ರವರೆಗೆ ರಾಜ್ಯಾದ್ಯಂತ ನಿರ್ಬಂಧಗಳು ಜಾರಿಯಲ್ಲಿರುವುದರಿಂದ, ರಾಜ್ಯ ಸರ್ಕಾರವು ಫೆಬ್ರವರಿ ಮೊದಲ ವಾರದಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನವನ್ನು ನಡೆಸಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಕಳೆದ ವರ್ಷ ಡಿಸೆಂಬರ್ 24 ರಂದು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಮುಗಿದ ನಂತರ, ಬಜೆಟ್ ಪೂರ್ವ ಅಧಿವೇಶನವನ್ನು ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಸಲು ಸರ್ಕಾರ ಮುಂದಾಗಿತ್ತು. ಆದರೆ, ಇದೀಗ ಫೆಬ್ರವರಿಯಲ್ಲಿ ನಡೆಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಜನವರಿಯಲ್ಲಿ ಜಂಟಿ ಅಧಿವೇಶನವನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಕೋವಿಡ್ ನಿರ್ಬಂಧಗಳು ಮತ್ತು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳದಿಂದಾಗಿ ಈ ತಿಂಗಳು ಅಧಿವೇಶನವನ್ನು ನಡೆಸಲು ಸಾಧ್ಯವಾಗುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ ಸಿ ಮಾಧುಸ್ವಾಮಿ ಅವರು ಹೇಳಿದ್ದಾರೆ.