ಕಲಬುರಗಿಯಲ್ಲಿ ವ್ಯಕ್ತಿಯ ಬರ್ಬರ ಕೊಲೆ!
ಚಿತ್ತಾಪುರ – ರಾವೂರ ಮಾರ್ಗ ಮಧ್ಯೆಯ ಯರಗಾ ಕ್ರಾಸ್ ಬಳಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಲಾಗಿದೆ.
ಕಲಬುರಗಿ: ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಮುಖದ ಮೇಲೆ ಸೈಜುಗಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ – ರಾವೂರ ಮಾರ್ಗ ಮಧ್ಯೆಯ ಯರಗಾ ಕ್ರಾಸ್ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿ ಅಂದಾಜು 45 ರಿಂದ 50 ವರ್ಷ ವಯಸ್ಸಿನ ಆಸುಪಾಸಿನವರಾಗಿದ್ದು, ಯಾರು? ಯಾವ ಊರಿನವರು? ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ತನಿಖೆ ಆರಂಭಿಸಿದ್ದಾರೆ.