ಸಂಕ್ರಾಂತಿ ಬಂತು ಆದರೆ ಕೋವಿಡ ಭೀತಿ ಇಂದ ಸಡಗರ ಕಿತ್ತುಕೊಂಡಿತು | Sankrantri Festival Special Article

ಕೋವಿಡ್ ತಡೆಯುವ ನಿಟ್ಟಿನಲ್ಲಿ ಸರಕಾರವು ಕೈಕೊಂಡಿರುವ ವಾರಂತ್ಯ ವೀಕೆಂಡ್ ಕರ್ಪೂಹ್ಯ್ ಇಂದಾಗಿ ಸಂಕ್ರಾಂತಿ ಹಬ್ಬದಿಂದ ಎಲ್ರು ದೂರ ಉಳಿಯುವಂತೆ ಮಾಡಿದೆ ಅದಕ್ಕೆ ಮುಖ್ಯ ಕಾರಣ ಈ ಕರೋನದ ಇನ್ನೊಂದು ತಳಿ ಓಮಿಕ್ರಾನ್.

ಈ ಹಬ್ಬದ ವಿಶೇಷವಾಗಿರುವ ಸುಲಗಾಯಿ, ಕಬ್ಬು ಆಗಿರುವುದರಿಂದ ಈ ಕೋವಿಡ್ ಇಂದಾಗಿ ಅದನ್ನು ಮಾರುವ ಬಡ ಜನರ ಹೊಟ್ಟೆ ಮೇಲೆ ಬರೆ ಎಳೆದಂತಾಗಿದೆ.

ಸಂಕ್ರಾಂತಿ ಹಬ್ಬ ದೇಶ ವಿದೇಶಗಳಲ್ಲಿ ಬೇರೆ ಬೇರೆ ಹೆಸರುಗಳಲ್ಲಿ ಆಚರಿಸುವ ಒಂದು ಸುಗ್ಗಿ ಹಬ್ಬ.

ಸಂಕ್ರಾಂತಿ ಹಬ್ಬದ ಹಿಂದಿನ ದಿನವೇ ಭೋಗಿ ಹಬ್ಬ. ಅಂದು ಹಳೆಯದನ್ನು ತೊರೆದು ಹೊಸದನ್ನು ಪಡೆದು ಸಂತೋಷ ಪಡುವ ಸಡಗರ.

ಮನೆಯನ್ನು ಶುದ್ಧಿಗೊಳಿಸುವುದು, ಮನೆ ಮಂದಿಯೆಲ್ಲಾ ಎಣ್ಣೆ ಸ್ನಾನ ಮಾಡಿ ಹೊಸ ಬಟ್ಟೆ ಧರಿಸುವುದು, ಮೂರನೆಯ ದಿನ ಹೊಸ ಫಸಲನ್ನು ಉಂಡು ಸಂತೋಷಪಡುವರು . ಮನೆಯ ಮುಂದೆ ವಿವಿಧ ರೀತಿಯಲ್ಲಿ ಬಣ್ಣ ಬಣ್ಣದ ರಂಗೋಲಿಯಿಂದ ಅಲಂಕಾರ.ಎಳ್ಳು ಬೆಲ್ಲವನ್ನು ತಯಾರಿಸಿ ಹಂಚುವ ರೂಢಿ ಇದೀಗ ಎಲ್ಲೆಲ್ಲೂ ಹೆಚ್ಚು ಪ್ರಚಲಿತವಿದೆ.

ಈ ಹಬ್ಬದ ವಿಶೇಷ ಅಡುಗೆ ಎಂದರೆ : ಶೇಂಗಾ ಹೋಳಿಗೆ, ಸಜ್ಜಿ ರೊಟ್ಟಿ, ಎಣ್ಣೆ ಬದನೇಕಾಯಿ ಪಲ್ಯ,

ಭೋಗಿ : ಕಡ್ಲೆಕಾಯಿ, ಕಬ್ಬು, ವಿವಿಧ ರೀತಿಯ ಸಿಹಿ ತಿನಿಸುಗಳು,

ಎಳ್ಳು ಬೆಲ್ಲವನ್ನು ಹಂಚುವ ಸಂಪ್ರದಾಯ ಬಹಳ ಮಹತ್ವ ಪಡೆದಿದೆ. ಬೇರೆ ದಿನಗಳಲ್ಲಿ ಎಳ್ಳನ್ನು ಬೇರೆಯವರಿಗೆ ಕೊಡುವುದಾಗಲೀ ಅವರಿಂದ ಪಡೆಯುವುದಾಗಲೀ ಶುಭಕರವಲ್ಲ. ಎಳ್ಳು ಧಾನ್ಯ ಏನಿದ್ದರೂ ಋಣಾನುಬಂಧದ ಸಂಕೇತವಾಗಿರುವುದರಿಂದ ಅದನ್ನು ನೆಂಟರಿಷ್ಟರೆಲ್ಲರಿಗೂ ಆ ದಿನ ಹಂಚುವುದು ಮುಖ್ಯವಾಗಿ ಬಾಂಧವ್ಯ ನಿರಂತರವಾಗಿರಲಿ ಎಂಬುದರ ಸಂಕೇತ.

ಆದ್ದರಿಂದಲೇ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡಿ ಎಂಬುದನ್ನು ಆ ದಿನ ಕೇಳುತ್ತೇವೆ. ಸಂಕ್ರಾಂತಿ ಮುಖ್ಯವಾಗಿ ಸುಗ್ಗಿಯ ಹಬ್ಬ. ಧವಸ, ಧಾನ್ಯ ಬೆಳೆಯಲು ಸಹಾಯಕವಾದ ರೈತನ ಸ್ನೇಹಿತ ದನಕರುಗಳಿಗೂ ಆ ದಿನ ರೈತ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ದನಕರುಗಳನ್ನು ವಿಶೇಷವಾಗಿ ಸಿಂಗರಿಸುತ್ತಾರೆ. ಕೊಂಬುಗಳನ್ನು ಶುಭ್ರಗೊಳಿಸಿ ವಿಶೇಷ ಬಣ್ಣಗಳಿಂದ ಅಲಂಕರಿಸುತ್ತಾರೆ. ಕಬ್ಬು, ಬೆಲ್ಲ, ಬಾಳೆಹಣ್ಣು, ಮನೆಯಲ್ಲಿ ಮಾಡಿದ ವಿಶೇಷ ತಿನಿಸುಗಳನ್ನು ಅವುಗಳಿಗೆ ತಿನ್ನಿಸುತ್ತಾರೆ.

ವೈಭವದ ಮೆರವಣಿಗೆಯಲ್ಲಿ ಅವುಗಳನ್ನು ಊರೆಲ್ಲಾ ತಿರುಗಾಡಿಸುತ್ತಾರೆ. ವರ್ಷವಿಡೀ ರೈತನೊಂದಿಗೆ ಬಿಡುವಿಲ್ಲದೆ ದುಡಿದ ಆ ಪ್ರಾಣಿಗಳಿಗೆ ಒಂದೆರಡು ದಿನಗಳು ವಿರಾಮವೂ ಈಗ ದೊರೆಯುತ್ತದೆ. ಹೀಗೆ ಸಂಕ್ರಾಂತಿಯ ಸಂಭ್ರಮ ನಾಡಿನ ಎಲ್ಲಾ ಭಾಗಗಳಲ್ಲಿಯೂ ಕಂಡು ಬರುತ್ತದೆ.

ಹೀಗೆ ಹತ್ತು ಹಲವು ರೀತಿಯ ನೀತಿ ನಿಯಮಗಳನ್ನು ಆಚರಿಸಿ ಎಲ್ಲರೂ ಸಂತೋಷದಿಂದ ಹಬ್ಬ ಆಚರಿಸಬೇಕಾಗಿರುವ ಈ ಹಬ್ಬ ತನ್ನ ಕಳೆಯನ್ನೇ ಕಳೆದುಕೊಳ್ಳುವಂತೆ ಮಾಡಿದೆ ಈ ಕೋವಿಡ್ 19 ಇದರಿಂದ ಎಲ್ರು ಜಾಗೃತವಾಗಿರಿ ಸರಳವಾಗಿ ಹಬ್ಬವನ್ನು ಆಚರಿಸಿ.

ಕಾಶಿಬಾಯಿ ಗುತ್ತೇದಾರ

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *