ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಇಂದು ಮತ್ತಷ್ಟು ಕಡಿಮೆ, 43,211 ಮಂದಿಗೆ ಪಾಸಿಟಿವ್
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಶುಕ್ರವಾರ 43,211 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇಂದು ನಿನ್ನೆಗಿಂತ 3195 ಕಡಿಮೆ ಪ್ರಕರಣಗಳು ದಾಖಲಾಗಿವೆ. ಅಲ್ಲದೆ 238 ಹೊಸ ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 43,211 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, 19 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 71,24,278 ಕ್ಕೆ ಏರಿದರೆ, ಸಾವಿನ ಸಂಖ್ಯೆ 1,41,756ಕ್ಕೆ ಏರಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 238 ಕೊರೋನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ಓಮಿಕ್ರಾನ್ ಸೋಂಕಿತರ ಸಂಖ್ಯೆ 1,605 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬುಧವಾರ 46,723 ಪಾಸಿಟಿವ್ ಪ್ರಕರಣಗಳು ಮತ್ತು 32 ಸಾವುಗಳು ವರದಿಯಾಗಿದ್ದವು. ಗುರುವಾರ 46,406 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದವು.