ರಾಜ್ಯದಲ್ಲಿ ನಿಲ್ಲದ ಕೊರೋನಾ ಅಬ್ಬರ: ಬೆಂಗಳೂರಿನಲ್ಲಿ 21,071 ಸೇರಿ ರಾಜ್ಯದಲ್ಲಿ 34,047 ಪ್ರಕರಣ ಪತ್ತೆ, 13 ಸಾವು!
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿರಂತರ ಏರುತ್ತಿದ್ದು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 34,047 ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 32,20,087ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ 13 ಮಂದಿ ಕೊರೋನಾಗೆ ಬಲಿಯಾಗಿದ್ದು ಸಾವಿನ ಸಂಖ್ಯೆ 38,431ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 21,071 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 14,1,6,807ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಕೊರೋನಾಗೆ 5 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 5,902 ಸೋಂಕಿತರ ಚೇತರಿಸಿಕೊಂಡಿದ್ದು ಒಟ್ಟಾರೆ ಚೇತರಿಕೆ ಸಂಖ್ಯೆ 29,83,645ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,97,987ಕ್ಕೆ ಏರಿಕೆಯಾಗಿದ್ದು ಬೆಂಗಳೂರು ಒಂದರಲ್ಲೇ 1 ಲಕ್ಷದ 29 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.19.29ರಷ್ಟಿದೆ. ಇಂದು ಒಟ್ಟು 1,76,470 ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದೆ.